55 ವರ್ಷಗಳ ಹಿಂದೆ ಉದಾತ್ತ ಆದರ್ಶಗಳನ್ನು ಇಟ್ಟುಕೊಂಡು ಸಮಾಜದ ಸರ್ವಾಂಗೀಣ ಬೆಳವಣಿಗೆಗೆ ನೆರವಾಗಬಲ್ಲ ಹಾಗೂ ಅಗತ್ಯವಾಗಿದ್ದ ನಮ್ಮ ಒಟ್ಟು ಸಮಾಜದ ಆರ್ಥಿಕವಾಗಿ ಹಿಂದುಳಿದ ಹಾಗೂ ಅನಾಥ ಮಕ್ಕಳನ್ನು ಪೋಷಿಸಿ ಅವರಿಗೆ ಯೋಗ್ಯವಾದ ಮೌಲ್ಯಾಧಾರಿತ, ವಿದ್ಯಾಭ್ಯಾಸ, ಪೋಷಣೆ, ಆರೋಗ್ಯ ನೀಡಿ ಅವರನ್ನು ಯೋಗ್ಯ ಪ್ರಜೆಗಳನ್ನಾಗಿ ರೂಪಿಸಲು ಹಾಗೂ ನೆರವು ನೀಡಲು ಹುಟ್ಟಿಕೊಂಡ ಶ್ರೀ ರಾಮಕೃಷ್ಣ ಸೇವಾ ಸಮಾಜ’ ಮುಂದೆ ನಡೆದು ಬಂದಂತಹ ದಾರಿ ಸುಲಭದ್ದಾಗಿರಲಿಲ್ಲ. ಇದರ ಹಿಂದೆ ನೂರಾರು ಮಂದಿ ಸೇವಾ ಮನೋಭಾವದ ಹಿರಿಯರ ಶ್ರದ್ಧೆ, ನಿಷ್ಠೆ, ತ್ಯಾಗ ಮನೋಭಾವ ಇಲ್ಲಿ ತುಂಬಾ ಕೆಲಸ ಮಾಡಿದೆ.